ನಂದಿ ಧ್ವಜಕ್ಕೆ ಸಿಎಂ ಕುಮಾರಸ್ವಾಮಿ ಪೂಜೆ: ಜಂಬೂಸವಾರಿಗೆ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಕೊನೆ ದಿನವಾದ ವಿಜಯದಶಮಿ ಅಂಗವಾಗಿ ಐತಿಹಾಸಿಕ ಜಂಬೂಸವಾರಿಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಂದಿ ಧ್ವಜ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಅರಮನೆ ಬಲದ್ವಾರದಲ್ಲಿ ಮಧ್ಯಾಹ್ನ 2.30ರಿಂದ 3.16ಕ್ಕೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಸಿಎಂ ಕುಮಾರಸ್ವಾಮಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.

7ನೇ ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅರ್ಜುನನಿಗೆ ಎಡಬಲದಲ್ಲಿ ವರಲಕ್ಷ್ಮಿ ಹಾಗೂ ಕಾವೇರಿ ಸಾಥ್ ನೀಡಲಿದ್ದಾರೆ. ಅಲ್ಲದೆ, ಜಂಬೂ ಸವಾರಿಯಲ್ಲಿ ಮುಂಚೂಣಿಯಲ್ಲಿ ಬಲರಾಮ ಹೆಜ್ಜೆ ಹಾಕಲಿದ್ದು, ಅಭಿಮನ್ಯು, ನೌಫತ್ ಆನೆ ಸೇರಿದಂತೆ ಇನ್ನುಳಿದ ಆನೆಗಳನ್ನು ಸಾಲಾನೆಗಳಾಗಿ ಬಳಸಲಾಗುತ್ತಿದೆ. ಜಂಬೂಸವಾರಿ ಹಿಂದೆ ಸ್ತಬ್ಧ ಚಿತ್ರಗಳ ಮೆರವಣಿಗೆ ಸಾಗಲಿದ್ದು, ಈ ಬಾರಿ 42 ಸ್ತಬ್ಧ ಚಿತ್ರಗಳು ಪಾಲ್ಗೊಂಡಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ