ಗದಗದ ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ

ಗದಗ: ಗದಗದ ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ತೀವ್ರ ಹೃದಯಾಘಾತದಿಂದ ಇಂದು ಮುಂಜಾನೆ ಲಿಂಗೈಕ್ಯರಾಗಿದ್ದಾರೆ.

ಬೆಳಿಗ್ಗೆ ಹೃದಯಾಘಾತಕ್ಕೊಳಗಾಗಿದ್ದ ಸ್ವಾಮೀಜಿಯವರನ್ನು ನಗರದ ಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಸ್ವಾಮೀಜಿಯವರ ವಿಯೋಗ ಅಸಂಖ್ಯಾತ ಭಕ್ತ ಸಮೂಹಕ್ಕೆ ಆಘಾತವನ್ನುಂಟುಮಾಡಿದೆ. ತೊಂಟದಾರ್ಯ ಶ್ರೀಗಳ ನಿಧನ ತೀವ್ರ ಆಘಾತ ಉಂತುಮಾಡಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

Gadaga,Tontadarya Mutt,Siddalinga Swami, passes away

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ