
ಬೆಂಗಳೂರು: ಗದಗದ ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ಅವರು ಲಿಂಗೈಕ್ಯವಾಗಿರುವ ಸುದ್ದಿ ಆಘಾತ ಮೂಡಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.
ಮಾನವ ತತ್ವದ ಮೈಲುಗಳನ್ನು ತನ್ನದಾಗಿಸಿಕೊಂಡು ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಿದ್ದ ಸ್ವಾಮೀಜಿ ಅವರ ಅಗಲಿಕೆ ಧಾರ್ಮಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಲಕ್ಷಾಂತರ ಭಕ್ತಾಧಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು.