ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು, ಅ.21-ಎಂ.ಎ ಪದವೀಧರರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿದ್ಯಾರಣ್ಯಪುರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೊಡ್ಡ ಬೊಮ್ಮಸಂದ್ರದ ರಾಮಕ್ಕ ದಾಸಪ್ಪ ಲೇಔಟ್‍ನ ಮೊದಲನೇ ಕ್ರಾಸ್ ನಿವಾಸಿ ರಾಜಶೇಖರ್ (26) ಆತ್ಮಹತ್ಯೆ ಮಾಡಿಕೊಂಡವರು.
ಎಂ.ಎ. ಪದವೀಧರರಾಗಿದ್ದ ಇವರು ನಿನ್ನೆ ಸಂಜೆ ಮನೆಯಲ್ಲಿ ಫ್ಯಾನಿಗೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.
ಶವವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿರುವ ವಿದ್ಯಾರಣ್ಯಪುರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ