ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ: ಪೆÇ್ರ.ವಸಂತ ನಾಯಕ

Varta Mitra News

ಬೆಂಗಳೂರು, ಅ.21- ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ವೇದಿಕೆ ಸಿಕ್ಕಾಗ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದು ವಿಶೇಷ ಉಪನ್ಯಾಸಕ ಪೆÇ್ರ.ವಸಂತ ನಾಯಕ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ತಮಗೆ ಇಷ್ಟವಾಗಿರುವ ಕ್ಷೇತ್ರದಲ್ಲಿ ಶ್ರದ್ಧೆ, ಭಕ್ತಿ, ಆಸಕ್ತಿಯಿಂದ ಕಲಿತರೆ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬಹುದು. ನಾನೂ ಕೂಡ ಶ್ರದ್ಧೆ-ಭಕ್ತಿಯಿಂದ ಕಲಿತು ಇಂದು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದೇನೆ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಪ್ರತಿಯೊಬ್ಬರೂ ಶ್ರದ್ಧೆಯಿಂದ ಕೆಲಸ ಮಾಡಿದಾಗ ಮಾತ್ರ ಯಶಸ್ಸು ಕಂಡುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕೋ-ಆಪರೇಟಿವ್ ಸೊಸೈಟಿ ಬಗ್ಗೆ ವಿವರಿಸಿ ಅವರಿಗೆ ಮನದಟ್ಟವಾಗುವಂತೆ ಉಪನ್ಯಾಸ ನೀಡುವುದರ ಜತೆಗೆ ಜೋಕ್ಸ್ ಹೇಳುತ್ತ ಗ್ರಾಮೀಣ ಸೊಸೈಟಿ ಬಗ್ಗೆ ತಿಳಿಸಿಕೊಟ್ಟರು.

ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರ ವಿಭಾಗದ ಮುಖ್ಯಸ್ಥ ಡಾ. ಮೂರ್ತಿ ಮಾತನಾಡಿ, ಪೆÇ್ರ.ವಸಂತ ನಾಯಕ ಅವರು ಸರಳ ವ್ಯಕ್ತಿವುಳ್ಳವರು. ಆ ಸರಳ ವ್ಯಕ್ತಿತ್ವಕ್ಕೆ ಇಂದು ಅವರು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಸಮಾಜ ನಮಗೆ ಏನು ಕೊಡುಗೆ ಕೊಟ್ಟಿದೆ ಎಂಬುದಕ್ಕಿಂತ ನಾವು ಸಮಾಜಕ್ಕೆ ಏನನ್ನು ಕೊಡುಗೆ ಕೊಟ್ಟಿದ್ದೇವೆ ಎಂಬುದನ್ನು ಮೊದಲು ನಾವು ಅರ್ಥ ಮಾಡಿಕೊಂಡು ಜೀವಿಸಿದಾಗ ಮಾತ್ರ ವ್ಯಕ್ತಿತ್ವಕ್ಕೆ ಬೆಲೆ ಸಿಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ಗ್ರಾಮೀಣರ ಬಗ್ಗೆ ಅರಿತುಕೊಂಡಾಗ ಸಮಾಜದಲ್ಲಿರುವ ಅನಿಷ್ಟ ಪದ್ಧತಿ ಹೋಗಲಾಡಿಸಬಹುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಗ್ರಾಮೀಣ ಅಭಿವೃದ್ಧಿ ಅಧ್ಯಯನ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ