ಕಾಫಿ ಬೆಳೆಗಾರರ ಸಮಸ್ಯೆ ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕೆಂದು ಒತ್ತಾಯ

ಬೆಂಗಳೂರು, ಅ.22-ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರ ಸಮಸ್ಯೆ ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಕಾಫಿ ಬೆಳೆಗಾರರ ಅಖಿಲ ಭಾರತ ಮಹಾಸಭೆಯಲ್ಲಿಂದು ಒಕ್ಕೊರಲ ನಿರ್ಣಯ ಕೈಗೊಳ್ಳಲಾಯಿತು.
ನಗರದಲ್ಲಿಂದು ಏರ್ಪಡಿಸಿದ್ದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳ ನೂರಾರು ಬೆಳೆಗಾರರು ಪಾಲ್ಗೊಂಡು, ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು.

ಕೂಡಲೇ ಡಾ.ಎಂ.ಎನ್.ಸ್ವಾಮಿನಾಥನ್ ವರದಿಯ ಶಿಫಾರಸುಗಳನ್ನು ಜಾರಿಗೆ ತರಬೇಕು. ವರದಿಯ ಶಿಫಾರಸ್ಸಿನಂತೆ ಕಾಫಿ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು. ಈ ಸಂಬಂಧ ಕಾನೂನು ಜಾರಿ ಮಾಡಬೇಕು. ವಿದೇಶದಿಂದ ಬರುವ ಕಾಫಿ ಉತ್ಪನ್ನಗಳ ಮೇಲೆ ಆಮದು ಸುಂಕ ಹೆಚ್ಚಿಸಬೇಕು. ಆಂತರಿಕ ಉತ್ಪನ್ನಗಳಿಗೆ ಪೆÇ್ರೀ ನೀಡಲು ಕ್ರಮಕೈಗೊಳ್ಳಬೇಕು ಎಂದು ಸಮಾವೇಶದಲ್ಲಿ ಒತ್ತಾಯಿಸಲಾಯಿತು.

ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಇನ್‍ಸ್ಟಂಟ್ ಕಾಫಿ ಉದ್ದಿಮೆ ಸ್ಥಾಪಿಸಿ ಆಂತರಿಕ ಕಾಫಿ ಬೆಳೆಗೆ ಪೆÇ್ರೀ ನೀಡಬೇಕು. ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರ ಸಾಲ ಮನ್ನಾ ಮಾಡಬೇಕು. ಪ್ರಕೃತಿ ವಿಕೋಪದಿಂದ ಕಾಫಿ ಬೆಳೆ ಹಾನಿಯಾಗಿದ್ದು, ಇದಕ್ಕೆ ಸೂಕ್ತ ಪರಿಹಾರ ನೀಡಬೇಕು. ಸರ್ಕಾರಿ ಜಮೀನಿನಲ್ಲಿ ಕಾಫಿ ಬೆಳೆಯುತ್ತಿರುವ ಬೆಳೆಗಾರರಿಗೆ ಜಮೀನಿನ ಹಕ್ಕುಪತ್ರ ನೀಡಬೇಕು ಎಂದು ಸಮಾವೇಶದಲ್ಲಿ ಒತ್ತಾಯಿಸಿದರು.

ಕೊಡಗು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಇವುಗಳ ತಡೆಗೆ ಅಗತ್ಯ ಕ್ರಮಕೈಗೊಳ್ಳಬೇಕು. ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಸಮಾವೇಶದಲ್ಲಿ ಒತ್ತಾಯಿಸಲಾಯಿತು.
ಸಮಾವೇಶದಲ್ಲಿ ಕೇರಳದ ಮಾಜಿ ಶಾಸಕ ಕೃಷ್ಣ ಪ್ರಸಾದ್, ಮುಖಂಡರಾದ ಚಂದ್ರನ್, ತಮಿಳುನಾಡಿನ ಸೆಂಥಿಲ್, ಕಾಫಿ ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ತೀರ್ಥಂ ಮಲ್ಲೇಶ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ