ಇಬ್ಬರು ನಾಯಕರ ನಡುವಿನ ಮುಸುಕಿನ ಗುದ್ದಾಟ

ಬೆಂಗಳೂರು, ಅ.22-ಲಿಂಗಾಯತ -ವೀರಶೈವ ಪ್ರತ್ಯೇಕ ಸ್ಥಾನಮಾನದ ವಿಷಯದಲ್ಲಿ ಕ್ಷಮೆಯಾಚನೆ ಹೇಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಚುನಾವಣೆ ಪ್ರಚಾರದಲ್ಲೂ ಅವರ ಜೊತೆ ಕಾಣಿಸಿಕೊಳ್ಳದೆ ದೂರ ಉಳಿದಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಳ್ಳಾರಿ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಇಂದಿನಿಂದ ಎರಡು ದಿನಗಳ ಕಾಲ ಅಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡುತ್ತಾರೆ. ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಚುನಾವಣಾ ಉಸ್ತುವಾರಿಗೂ ನಿಯೋಜನೆಗೊಂಡಿದ್ದಾರೆ.
ಆದರೆ ಕಾಂಗ್ರೆಸ್‍ನ ಪ್ರಮುಖ ನಾಯಕರಾದ ಸಿದ್ದರಾಮಯ್ಯ ಅವರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇಂದು ಬೆಂಗಳೂರಿನಲ್ಲೇ ಉಳಿದುಕೊಂಡಿದ್ದಾರೆ. ಇದು ಇಬ್ಬರೂ ನಾಯಕರ ನಡುವಿನ ಮುಸುಕಿನ ಗುದ್ದಾಟವನ್ನು ಮತ್ತಷ್ಟು ಬಯಲಿಗೆ ತಂದಿಟ್ಟಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ