ಬೆಂಗಳೂರು, ಅ.22-ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರನ್ನಾಗಿ ತನ್ವೀರ್ ಅಹಮದ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಜೆಡಿಎಸ್ನಲ್ಲಿ ಅಸಮಾದಾನದ ಹೊಗೆಯಾಡಲು ಪ್ರಾರಂಭವಾಗಿದೆ.
ಒಂದೇ ಸಮುದಾಯಕ್ಕೆ ಸೇರಿದವರಿಗೆ ಮಣೆ ಹಾಕಲಾಗುತ್ತಿದೆ.ಇತರೆ ನಿಗಮ ಮಂಡಳಿ ನೇಮಕ ವಿಚಾರದಲ್ಲಿ ನೆಪ ಹೇಳಲಾಗುತ್ತಿದೆ ಎಂದು ಜೆಡಿಎಸ್ನ ಕೆಲ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಚಾರವನ್ನು ಕೆಲವರು ಪಕ್ಷದ ವರಿಷ್ಠರ ಗಮನಕ್ಕೂ ತರಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಸೇರಿದಂತೆ ಕೆಲವು ವಿಚಾರಗಳಲ್ಲಿ ಒಂದೇ ಸಮುದಾಯದವರಿಗೆ ಮಣೆ ಹಾಕಲಾಗುತ್ತಿದೆ. ಹೀಗೆ ಮುಂದುವರೆದರೆ ಪಕ್ಷದ ಸಂಘಟನೆ ಹೇಗೆ ಎಂಬ ಅಸಮಾದಾನವನ್ನು ಹಲವರು ತೋಡಿಕೊಂಡಿದ್ದಾರೆ.
ಕೆಲವರು ಬಹಿರಂಗವಾಗಿ ಹೇಳಿಕೊಳ್ಳಲಾಗದೆ ಅಸಮಾದಾನ ಸಹಿಸಿಕೊಳ್ಳಲಾಗಿದೆ ಎನ್ನಲಾಗಿದೆ.