ಬೆಂಗಳೂರು, ಅ.22- ರಾಮನಗರ ವಿಧಾನಸಭಾ ಕ್ಷೇತ್ರ, ಮಂಡ್ಯ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಜೆಡಿಎಸ್ ಪಕ್ಷದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.
ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ, ಶಾಸಕ ಕೆ.ಗೋಪಾಲಯ್ಯ, ಮಾಜಿ ಶಾಸಕ ಸುರೇಶ್ಬಾಬು, ವಿಧಾನಪರಿಷತ್ ಸದಸ್ಯ ಬೋಜೇಗೌಡ ಹಾಗೂ ಬೆಂಗಳೂರು ನಗರ ಘಟಕದ ಅಧ್ಯಕ್ಷ ಪ್ರಕಾಶ್ ಅವರನ್ನು ಉಸ್ತುವಾರಿಗಳಾಗಿ ಪಕ್ಷದ ರಾಜ್ಯಾಧ್ಯಕ್ಷರಾದ ವಿಶ್ವನಾಥ್ ನೇಮಕ ಮಾಡಿದ್ದಾರೆ.
ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಪರಿಷತ್ ಸದಸ್ಯರಾದ ಶ್ರೀಕಂಠೇಗೌಡ, ಅಪ್ಪಾಜಿಗೌಡ, ಟಿ.ಎ.ಶರವಣ, ನಾರಾಯಣಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾಖಾನ್ ಅವರನ್ನು ನೇಮಕ ಮಾಡಲಾಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ವಿಧಾನಪರಿಷತ್ ಸದಸ್ಯರಾದ ಫಾರೂಖ್, ಶಾಂತರಾಜು, ಮಾಜಿ ಸಚಿವ ಬಿ.ಬಿ.ಲಿಂಗಯ್ಯ, ಮಾಜಿ ಶಾಸಕ ವೈ.ಎಸ್.ವಿ.ದತ್ತಾ, ಕೋನರೆಡ್ಡಿ ಅವರಿಗೆ ಉಪ ಚುನಾವಣೆಯ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದು, ಪಕ್ಷದ ಅಭಿವೃದ್ಧಿಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದ್ದಾರೆ.
ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕರಾದ ಕೋನರೆಡ್ಡಿ, ಶಿವಶಂಕರ್ ಅವರನ್ನು ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಪರಿಷತ್ ಸದಸ್ಯ ಶರವಣ ಮತ್ತು ಶಾಸಕ ರಾಜಾವೆಂಕಟಪ್ಪ ನಾಯಕ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.