ಮಹಿಳೆ ಮೇಲೆ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ರಾಡ್ ತುರುಕಿ ಪೈಶಾಚಿಕ ಕೃತ್ಯವೆಸಗಿದ ಕಾಮುಕರು

ಕೋಲ್ಕತಾ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಕಾಮುಕರು ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ಪೈಶಾಚಿಕ ಕೃತ್ಯವೆಸಗಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದಿದೆ.

ದೆಹಲಿಯಲ್ಲಿ ನಡೆದ ನಿರ್ಬಯಾ ಗ್ಯಾಂಗ್ ರೇಪ್ ಪ್ರಕರಣ ಇಡೀ ದೇಶವನ್ನೇ ಬಿಚ್ಚಿಬೀಳಿಸಿತ್ತು. ಈಗ ಇಂತದ್ದೇ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪ್ರಸ್ತುತ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಂತ್ರಸ್ತ ಮಹಿಳೆ ಪರಿಸ್ಥಿತಿ ಗಂಭೀರವಾಗಿದೆ.

ಮಹಿಳೆ ಮೇಲೆ ಅತ್ಯಾಚಾರವೆಸಗಿ ಈ ಕೃತ್ಯವೆಸಗಿರುವ ಕಾಮುಕರು ಆಕೆಯ ಸಂಬಂಧಿಕ ಆಗಿದ್ದಾರೆ ಎನ್ನಲಾಗಿದೆ. ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯ ಕುಟುಂಬ ಹಾಗೂ ಕಾಮುಕರ ಕುಟುಂಬಗಳ ನಡುವೆ ವೈಷಮ್ಯವಿತ್ತು. ಇದೇ ಕಾರಣಕ್ಕಾಗಿ ಮಹಿಳೆ ಪತಿ ಮನೆಯಲ್ಲಿಲ್ಲದ ಸಂದರ್ಭ ನೋಡಿಕೊಂಡು
ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿ ಪೈಶಾಕಿಕ ಕೃತ್ಯ ಮೆರೆದಿದ್ದಾರೆ.

ಘಟನೆ ಬಳಿಕ ಸ್ಥಳದಲ್ಲಿ ಹೋಗುತ್ತಿದ್ದ ಆಟೋ ಚಾಲಕನೊಬ್ಬ ಮಹಿಳೆಯನ್ನು ನೋಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾನೆಂದು ಪೊಲೀಸರು ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಹಾಗೂ ಆತನೊಂದಿಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ