ಆಂಗ್ಲ ಸಾಮ್ರಾಜ್ಯದ ವಿರುದ್ಧ ಧ್ವನಿ ಎತ್ತಿದ ನಮ್ಮ ಹೆಮ್ಮೆಯ ಧೃವತಾರೆ ರಾಣಿ ಚೆನ್ನಮ್ಮ

ಬೆಂಗಳೂರು, ಅ.23- ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬೆಳ್ಳಿ ಚುಕ್ಕಿ ಇದ್ದಂತೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕ ವಿಶುಕುಮಾರ್ ಬಣ್ಣಿಸಿದ್ದಾರೆ.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತರ ಭಾರತದಲ್ಲಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ, ದಕ್ಷಿಣ ಭಾರತದಲ್ಲಿ ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ವೀರ ವನಿತೆಯರು ಎಂದು ಹೇಳಿದರು.

ಆಂಗ್ಲ ಸಾಮ್ರಾಜ್ಯದ ವಿರುದ್ಧ ಧ್ವನಿ ಎತ್ತಿದ ನಮ್ಮ ಹೆಮ್ಮೆಯ ಧೃವತಾರೆ ರಾಣಿ ಚೆನ್ನಮ್ಮ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಚೆನ್ನಮ್ಮ ಅವರು ನೀಡಿರುವ ಕೊಡುಗೆ ಅಪಾರ. ಮಹಿಳೆಯರ ಪಾತ್ರ ಇಂದಿನ ದಿನಗಳಲ್ಲಿ ಪ್ರಮುಖವಾಗಿದೆ. ಎಲ್ಲ ಚಟುವಟಿಕೆಗಳಲ್ಲೂ ಮಹಿಳೆ ಪ್ರೇರಕ ಶಕ್ತಿ ಎಂಬುದನ್ನು ಒಪ್ಪಿಕೊಂಡು ಅವರ ಪ್ರತಿಭೆ, ಸಾಮಥ್ರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ವಿಜೃಂಭಣೆಯ ಕಿತ್ತೂರು ಉತ್ಸವವನ್ನು ಆಯೋಜಿಸಿದೆ ಎಂದು ಇದೇ ವೇಳೆ ಅವರು ತಿಳಿಸಿದರು.

ಕೂಡಲ ಸಂಗಮದ ಲಿಂಗಾಯತ ಪಂಚಮಶಾಲಿ ಮಹಾಪೀಠದ ಶ್ರೀ ಜಯಬಸವ ಮೃತ್ಯುಂಜಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಡಾ.ಶಾರದಾ ಮಳ್ಳೂರ್ ಮತ್ತಿತರರು ಪಾಲ್ಗೊಂಡಿದ್ದರು.
ವೀರಮಾತೆ ಕಿತ್ತೂರು ಚೆನ್ನಮ್ಮ ಕಿರುಹೊತ್ತಿಗೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ