ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

Deve Gowda

ಬೆಂಗಳೂರು, ಅ.23- ಪ್ರಸಕ್ತ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಆಯ್ಕೆಮಾಡಲಾಗಿದೆ.
ನ್ಯಾಯಮೂರ್ತಿ ಎಚ್.ಎಂ.ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯ್ಕೆ ಸಮಿತಿ ದೇವೇಗೌಡ ಅವರನ್ನು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. ನಿನ್ನೆ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಾಲ್ಮೀಕಿ ಪ್ರಶಸ್ತಿಗೆ ದೇವೇಗೌಡರನ್ನು ಆಯ್ಕೆ ಮಾಡಲಾಗಿದ್ದು, ಈ ಸಂಬಂಧ ಅಧಿಕೃತ ಆದೇಶವನ್ನು ಕೂಡ ಸಮಾಜ ಕಲ್ಯಾಣ ಇಲಾಖೆ ಹೊರಡಿಸಿದೆ.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರತಿ ವರ್ಷ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪರಿಶಿಷ್ಟ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿರುವ ವಿಷಯವನ್ನು ತಿಳಿಸಿ, ನಾಳೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸುವಂತೆ ಮನವಿ ಮಾಡಿದ್ದಾರೆ.
ಈ ಸಂಬಂಧ ಪ್ರಶಸ್ತಿ ಸ್ವೀಕರಿಸುವ ಪತ್ರವನ್ನು ಕೂಡ ದೇವೇಗೌಡ ಅವರಿಗೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ