ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಸುಪ್ರೀಂ ಮೊರೆ

ನವದೆಹಲಿ, ಅ.24-ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆ ಸಿಬಿಐನಲ್ಲಿ ಉನ್ನತ ಅಧಿಕಾರಿಗಳ ಕಿತ್ತಾಟ, ವಿವಾದ ತೀವ್ರ ಸ್ವರೂಪ ಪಡೆದಿದೆ. ತಮ್ಮ ಎಲ್ಲಾ ಅಧಿಕಾರಗಳನ್ನು ಕಿತ್ತುಕೊಂಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಇಂದು ಸುಪ್ರೀಂ ಕೋರ್ಟ್‍ನ ಮೊರೆ ಹೋಗಿದ್ದಾರೆ.

ಈ ಪ್ರಕರಣದ ವಿಚಾರಣೆಯನ್ನು ಅ.26 ರ ಶುಕ್ರವಾರದಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.

ತಮ್ಮ ಅಧಿಕಾರಗಳನ್ನು ಮೊಟಕುಗೊಳಿಸಿ ಕಡ್ಡಾಯ ರಜೆ ಮೇಲೆ ಕಳುಹಿಸಿರುವ ಆದೇಶ ಪ್ರಶ್ನಿಸಿ ಇಂದು ಸುಪ್ರೀಂ ಕೋರ್ಟ್‍ಗೆ ಮನವಿ ಸಲ್ಲಿಸಿದರು. ಮುಖ್ಯ ನ್ಯಾಯಮೂರ್ತಿ ರಂಜನ್‍ಗೊಗೈ ನೇತೃತ್ವದ ಪೀಠವು ಅಲೋಕ್ ಪರ ವಕೀಲ ಗೋಪಾಲ ಶಂಕರನಾರಾಯಣನ್ ಅವರು ಸಲ್ಲಿಸಿರುವ ನಿವೇದನೆಯನ್ನು ಪುರಸ್ಕರಿಸಿತ್ತು.

ಈ ಪ್ರಕರಣದ ಬಗ್ಗೆ ಅ.26ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ