ಬೆಂಗಳೂರು, ಅ.24- ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಅ.31ರಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿ.ದಾಸ್, ಜಿಲ್ಲಾಧ್ಯಕ್ಷ ಎಸ್.ರಾಮಕೃಷ್ಣ ಮಾತನಾಡಿ, 31ರಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಂತರ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಬಂದರೆ ಮಾದಿಗ ಜನಾಂಗದವರಿಗೆ ಒಳಿತಾಗಲಿದೆ.ಕೆಲವು ಸವಲತ್ತುಗಳನ್ನು ಉಳ್ಳವರೇ ಪಡೆಯುತ್ತಿದ್ದಾರೆ.ನಮ್ಮ ಸಮುದಾಯದವರಿಗೆ ಇದರಿಂದ ಅನ್ಯಾಯವಾಗುತ್ತಿದೆ.ಹಾಗಾಗಿ ಆಯೋಗದ ವರದಿಯನ್ನು ಕೂಡಲೇ ಜಾರಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.