ಹೊಸದಿಲ್ಲಿ, ಅ.24- ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಶ್ರೀಗಳು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಪ್ರಧಾನಿ ನಿವಾಸಕ್ಕೆ ಇತರ ಕೆಲವು ಶ್ರೀಗಳೊಂದಿಗೆ ತೆರಳಿದ ನಿರ್ಮಲಾನಂದ ಶ್ರೀಗಳು ಕೆಲವು ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕೂಡ ಉಪಸ್ಥಿತರಿದ್ದರು.
ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಸ್ವಾಮೀಜಿಗಳು ಪ್ರಧಾನಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿರುವ ವೇಳೆಯಲ್ಲಿ ನಡೆದಿರುವ ಈ ಭೇಟಿ ಭಾರೀ ಕುತೂಹಲವನ್ನು ಮೂಡಿಸಿದೆ.