ಮುಂದಿನ 10 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ನಿಲ್ಲುವುದಿಲ್ಲ, ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕೀಶೋರ್

ಪಟನಾ ,ಅ.24- ತಾವು ಮುಂದಿನ 10 ವರ್ಷದ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬಿಹಾರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ತಮ್ಮ ಗುರಿ ಎಂದು ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

2019 ರ ಚುನಾವಣೆಯಲ್ಲಿ ಜೆಡಿಯುನಿಂದ ಸ್ಪರ್ಧಿಸುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಮುಂದಿನ ಲೋಕಸಭೆ, ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ. ಬಿಹಾರದ ಅಭಿವೃದ್ದಿ ಕಡೆ ಚಿತ್ತ ಹರಿಸುವುದಾಗಿ ತಿಳಿಸಿದ್ದಾರೆ.

ಸೆಪ್ಟೆಂಬರ್ ನಲ್ಲಿ ಜೆಡಿಯುಗೆ ಸೇರ್ಪಡೆಯಾದ ಪ್ರಶಾಂತ್ ಕಿಶೋರ್ ಅವರನ್ನು ಇತ್ತೀಚಿಗಷ್ಟೇ ಪಕ್ಷದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಅಲ್ಲದೇ ಅವರನ್ನು ರಾಜ್ಯಸಭೆಗೆ ಕಳುಹಿಸುವ ಬಗ್ಗೆಯು ಚಿಂತನೆ ನಡೆದಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ