ಶ್ರೀನಗರ,ಅ.24-ಕಣಿವೆ ರಾಜ್ಯದ ನೌಗಾಮ್ನಲ್ಲಿ ಉಗ್ರರು ಮತ್ತು ಭಾರತೀಯ ಸೇನೆಪಡೆ ನಡುವೆ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಶ್ರೀನಗರ ಹೊರವಲಯವಾದ ನೌಗಾಮ್ ಸೂತು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿರುವುದಾಗಿ ಖಚಿತ ಮಾಹಿತಿ ಪಡೆದ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.
ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಮರೆಯಲ್ಲಿ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸೇನಾಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿದುಬಂದಿದೆ.