ರಾಜ್ಯಸರ್ಕಾರದ ಆರೋಗ್ಯ ಕ್ಷೇತ್ರದ ಬಜೆಟ್ ಶೇ.15ರಷ್ಟಕ್ಕೆ ಏರಿಕೆಗೆ ಆಗ್ರಹ

Varta Mitra News

ಬೆಂಗಳೂರು, ಅ.25-ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು, ರಾಜ್ಯಸರ್ಕಾರದ ಆರೋಗ್ಯ ಕ್ಷೇತ್ರದ ಬಜೆಟ್‍ನ್ನು ಶೇ.15ರಷ್ಟಕ್ಕೆ ಏರಿಕೆ ಮಾಡಬೇಕು, ಅದಕ್ಕೆ ಅಗತ್ಯವಿರುವ ಆರ್ಥಿಕ ನೆರವನ್ನು ಕೇಂದ್ರ ಸರ್ಕಾರ ನೀಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆ ಒತ್ತಾಯಿಸಿದೆ.
ನಗರದಲ್ಲಿಂದು ಪ್ರತಿಭಟನೆ ನಡೆಸಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರು ತಮ್ಮ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಆರೋಗ್ಯ ಇಲಾಖೆಯ ಎಲ್ಲಾ ಗುತ್ತಿಗೆ ನೌಕರರಿಗೆ ನಿವೃತ್ತಿ ವಯಸ್ಸಿನವರೆಗೂ ಸೇವಾ ಭದ್ರತೆಯನ್ನು ಒದಗಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಸರ್ಕಾರಿ ನೌಕರರಿಗೆ ನೀಡುವ ಜ್ಯೋತಿ ಸಂಜೀವಿನಿ ವೈದ್ಯಕೀಯ ಯೋಜನೆಯು ಆರೋಗ್ಯ ಇಲಾಖೆಯಲ್ಲಿಯೇ ಕೆಲಸ ಮಾಡುವ ಗುತ್ತಿಗೆ ನೌಕರರಿಗೆ ಇಲ್ಲವಾಗಿದ್ದು, ಅದನ್ನು ಜಾರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಖಾಯಂ ನೇಮಕಾತಿಯ ಕಾರಣ ಕೇಳಿ ಸ್ಥಳ ಬದಲಾವಣೆ ಮಾಡಬಾರದು, ಯಾವುದೇ ಸೇವಾ ಭದ್ರತೆ ಇಲ್ಲದಿರುವುದರಿಂದ ಸಣ್ಣ ಪುಟ್ಟ ಕಾರಣ ನೀಡಿ ಹಲವರನ್ನು ಕೆಲಸದಿಂದ ತೆಗೆದು ಹಾಕಲಾಗಿದ್ದು, ಮತ್ತೆ ಅದೇ ಸ್ಥಳಕ್ಕೆ ಮರುನೇಮಕಾತಿ ಮಾಡಿಕೊಳ್ಳಬೇಕು ಎಂಬುದೂ ಸೇರಿದಂತೆ ತಮ್ಮ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ