ಏರ್ಸೆಲ್ ಮಾಕ್ಸಿಸ್ ಪ್ರಕರಣದಲ್ಲಿ ಪಿ.ಚಿದಂಬರಂ ನಂಬರ್ 1 ಆರೋಪಿ: ಇಡಿ

ನವದೆಹಲಿ: ಏರ್ಸೆಲ್ ಮಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಚಾರ್ಜ್ ಶೀಟ್ ದಾಖಲಿಸಿದೆ. ಪ್ರಕರಣದಲ್ಲಿ ಚಿದಂಬರಂ ನಂಬರ್ 1 ಆರೋಪಿಯಾಗಿದ್ದಾರೆ.

ಏರ್ಸೆಲ್ ಮಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಒಂಬತ್ತು ಆರೋಪಿಗಳನ್ನು ಹೆಸರಿಸಿರುವ ಇಡಿ, ಪಿ ಚಿದಂಬರಂ ಅವರನ್ನು ಮೊದಲ ಪ್ರಮುಖ ಆರೋಪಿ ಎಂದು ತಿಳಿಸಿದ್ದು, ಉಳಿದಂತೆ ಎಸ್. ಭಾಸ್ಕರಮಾನ್, ನಾಲ್ಕು ಮ್ಯಾಕ್ಸಿಸ್ ಕಂಪೆನಿಗಳು ಸಿಬಿಐ ವಿಶೇಷ ನ್ಯಾಯಾಧೀಶ ಒ.ಪಿ. ಸೈನಿ ಸೇರಿ ಒಂಬತ್ತು ಆರೋಪಿಗಳನ್ನು ಇಲ್ಲಿ ಹೆಸರಿಸಿದೆ.

ಪ್ರಕರಣದಲ್ಲಿ ಇಡಿ ಸಲ್ಲಿಸಿದ ಎರಡನೇ ಆರೋಪಪಟ್ಟಿ ಇದಾಗಿದೆ. ಚಿದಂಬರಂನ ಅವರ ಎಫ್ಐಪಿಬಿ ಅಕ್ರಮ ಅನುಮೋದನೆ ಕುರಿತಂತೆ ಇದರಲ್ಲಿ ವಿವರಗಳಿದೆ.
ಇದಕ್ಕೆ ಮುನ್ನ ಸಲ್ಲಿಕೆಯಾದ ಆರೋಪಪಟ್ಟಿಯಲ್ಲಿ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಹಾಗೂ ಅವರ ಸೋದರ ಕಲಾನಿಧಿ ಮಾರನ್ ಹಾಗೂ ಇತರರ ಹೆಸರು ನಮೂದಾಗಿತ್ತು.

ಚಿದಂಬರಂ 2006 ರ ಮಾರ್ಚ್ ನಲ್ಲಿ ಎಫ್ಐಪಿಬಿ ಅನುಮೋದನೆಯನ್ನು ನೀಡಿದ್ದಾರೆ ಮಾರಿಶಸ್ ಮೂಲದ ಗ್ಲೋಬಲ್ ಕಮ್ಯುನಿಕೇಷನ್ ಸರ್ವಿಸಸ್ ಹೋಲ್ಡಿಂಗ್ಸ್ ಲಿಮಿಟೆಡ್ನ ಅಂಗಸಂಸ್ಥೆ ಮ್ಯಾಕ್ಸಿಸ್ ಗೆ ಅನುಮೋದನೆ ದೊರಕಿದೆ ಎಂದು ಇಡಿ ಆರೋಪಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ