ಗದಗ: ನಾವು ಆಪರೇಷನ್ ಕಮಲ ಮಾಡಲ್ಲ. ಆದರೆ ಬಿಜೆಪಿಯಲ್ಲಿ 105 ಶಾಸಕಾರದ ಮೇಲೆ ರಾಜ್ಯದ ಚಿತ್ರಣವೇ ಬದಲಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಬಿಜೆಪಿ ಆಪರೇಷನ್ ಕಮಲ ಮಾಡಬಾರದೆಂದು ತೀರ್ಮಾನ ಕೈಗೊಂಡಿದೆ. ಕಾಂಗ್ರೆಸ್ನ ಒಳ ಜಗಳದಿಂದ ದಿನಕೊಬ್ಬರು ಶಾಸಕರು ಬಂಡಾಯ ಏಳುತ್ತಿದ್ದು, ಸಮ್ಮಿಶ್ರ ಸರಕಾರದಲ್ಲಿ ಯಾವುದು ಸರಿ ಇಲ್ಲ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಹೇಗಾದರೂ ಮಾಡಿ ಪಕ್ಷದಿಂದ ಹೊರಬರಬೇಕು ಎಂದು ಕಾಂಗ್ರೆಸ್ ಶಾಸಕರು ನಿರ್ಧರಿಸುತ್ತಿದ್ದಾರೆ. ಹೀಗಾಗಿ ಬಿಜೆಪಿಯಲ್ಲಿ 105 ಶಾಸಕರಾದ ಬಳಿಕ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗಲಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ರೇವಣ್ಣ ಅವರು ಕಾಂಗ್ರೆಸ್ ಶಾಸಕರ ಕೆಲಸ ಮಾಡಿಕೊಡುತ್ತಿಲ್ಲ ಎಂಬ ಆರೋಪಗಳು ಆರಂಭವಾಗಿದೆ. ಕಾಂಗ್ರೆಸ್ ನಲ್ಲಿ ಒಬ್ಬರಾಗಿ ಶಾಸಕರು ಬಂಡಾಯವೇಳುತ್ತಿದ್ದಾರೆ. ಈ ಗಿನಿಂದಲೇ ಕಾಂಗ್ರೆಸ್ ನ ಅವನತಿ ಆರಂಭವಾಗಿದೆ ಎಂದರು.
ಇದೇ ವೇಳೆ ಶಿವಮೊಗ್ಗ, ಬಳ್ಳಾರಿ, ಜಮಖಂಡಿಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.