ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಬಡತನದ ಹಿನ್ನೆಲೆ ಹೊಂದಿರುವ ಕುಟುಂಬದಿಂದ ಬಂದು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಇಸ್ಕಾನ್ ವತಿಯಿಂದ ನೀಡುವ ವಿದ್ಯಾರ್ಥಿ ವೇತನವನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಬಿಡಿಎ ಕ್ವಾಟ್ರಸ್‌ನಲ್ಲಿ ವಿತರಿಸಿದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪೊಲೀಸಗ‌ ಕಾನ್ಸ್‌ಟೇಬಲ್, ಹೂ ಮಾರಿಕೊಂಡು ಜೀವನ‌ನಡೆಸುವ ಬಡ ಕುಟುಂಬದ ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ಅವರಿಗೆ ಇಸ್ಕಾನ್ ವತಿಯಿಂದ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ‌ ಶ್ಲಾಘನೀಯ.‌ ಸಾಂಕೇತಿಕವಾಗಿ ೧೦ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಿಸಲಾಗಿದೆ. ದೊಡ್ಡ ಮಟ್ಟದಲ್ಲಿ ಇಸ್ಕಾನ್ ವಿತರಿಸಲಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ