ಸಿಬಿಐ ವಿವಾದ: ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿ ಸೇರಿ ಹಲವರು ಪೊಲೀಸ್ ವಶಕ್ಕೆ

ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಎಐಸಿಸಿ ಅಧ್ಯಕ್ಷ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಬಿಐ ಮುಖ್ಯ ಕಚೇರಿ ಎದುರು ವಿಪಕ್ಷಗಳ ನಾಯಕರು ಬೃಹತ್ ಪ್ರತಿಭಟನೆ ನಡೆಸಲಾಯಿತು. ಲೋಧಿ ರಸ್ತೆಯಲ್ಲಿರುವ ದಯಾಳ್ ಸಿಂಗ್ ಕಾಲೇಜಿನಿಂದ ಸಿಬಿಐ ಮುಖ್ಯ ಕಚೇರಿವರೆಗೂ 4.2 ಕಿಮೀ ವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಂಜಾಗೃತಾ ಕ್ರಮವಾಗಿ ಪೊಲೀಸರು ರಾಹುಲ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು.

ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಅಶೋಕ್ ಗೆಹ್ಲೋಟ್, ಅಹ್ಮದ್ ಪಟೇಲ್, ಮೋತಿಲಾಲ್ ವೋರಾ, ವೀರಪ್ಪ ಮೊಯ್ಲಿ, ಆನಂದ್ ಶರ್ಮಾ ಸೇರಿದಂತೆ ಟಿಎಂಸಿ ಹಾಗೂ ಸಿಪಿಐ ಪಕ್ಷಗಳ ಪ್ರಮುಖ ನಾಯಕರು ಭಾಗಿಯಾಗಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ