ಸತ್ಯ ಮರೆಮಾಚಲು ಪ್ರಧಾನಿ ಮೋದಿ ಯತ್ನ: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್​ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯ ಮರೆಮಾಚಲು ಯತ್ನಿಸುತ್ತಿದ್ದಾರೆ. ಆದರೆ ಅಂತಿಮವಾಗಿ ಸತ್ಯ ಹೊರ ಬೀಳಲಿದೆ ಎಂದಿದ್ದಾರೆ.

ದೆಹಲಿಯ ಸಿಬಿಐ ಮುಖ್ಯಕಚೇರಿಯ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್​ ಗಾಂಧಿ ಮತ್ತು ಇತರೆ ನಾಯಕರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ.
ಲೋಧಿ ಕಾಲೋನಿ ಪೊಲೀಸ್ ಠಾಣೆಯಿಂದ ಬಿಡುಗಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿಯವರ ಈ ನಡೆಯಿಂದ ಯಾವುದೇ ಪ್ರಯೋಜನ ಇಲ್ಲ. ಭಯ ಹುಟ್ಟಿಸುವ ಉದ್ದೇಶದಿಂದ ಸಿಬಿಐ ನಿರ್ದೇಶಕರ ವಿರುದ್ಧ ಕ್ರಮ ತೆಗೆದುಕೊಂಡು ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಸಿಬಿಐ, ಚುನಾವಣಾ ಆಯೋಗ ಮತ್ತು ಜಾರಿ ನಿರ್ದೇಶನಾಲಯದಲ್ಲಿ ಪ್ರಧಾನಿ ಮೋದಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕೇಂದ್ರ ಎನ್ ಡಿಎ ಸರ್ಕಾರದ ಈ ಕ್ರಮ ಖಂಡನೀಯವಾದದ್ದು ಎಂದು ಗುಡುಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ