ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ ಯೋಧ ರಾಜೇಂದ್ರ ಸಿಂಗ್ ಅವರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.
ನಿನ್ನೆ ಅನಂತನಾಗ್ ಸಮೀಪದ ಬೈಪಾಸ್ ನಲ್ಲಿ ಭಾರತೀಯ ಸೇನೆಯ ಕ್ಷಿಪ್ರ ಕಾರ್ಯಾಚರಣೆ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಜೇಂದ್ರ ಸಿಂಗ್ ಅವರ ವಾಹನದ ಮೇಲೆ ಕೆಲ ಯುವಕರು ಕಲ್ಲು ತೂರಾಟ ನಡೆಸಿದ್ದರು.ಈ ವೇಳೆ ರಾಜೇಂದ್ರ ಸಿಂಗ್ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು 92 ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಬದೌನ್ ಜಿಲ್ಲೆಯವರಾದ ರಾಜೇಂದ್ರ ಸಿಂಗ್ ಅವರು 2016ರಲ್ಲಿ ಸೇನೆ ಸೇರಿದ್ದರು.