ವಿಂಡೀಸ್, ಆಸೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ

ಮುಂಬೈ: ಮುಂಬರುವ ವೆಸ್ಟ್ ಇಂಡೀಸ್ ಮತ್ತು ಆತಿಥೇಯ ಆಸ್ಟ್ರೇಲಿಯಾ ವಿರುದ್ದದ ಟಿ20 ಸರಣಿಗೆ ಬಿಸಿಸಿಐ ಟೀಂ ಇಂಡಿಯಾವನ್ನ ಪ್ರಕಟಿಸಿದೆ. ಈ ಎರಡೂ ಸರಣಿಯಲ್ಲಿ ತಂಡದ ಮಾಜಿ ನಾಯಕ ಧೋನಿಗೆ ಸ್ಥಾನ ನೀಡಲು ಆಗಿಲ್ಲ.

ವೆಸ್ಟ್‍ಇಂಡೀಸ್ ವಿರುದ್ಧದ ಟಿ20 ಸರಣಿಗೆ ಕ್ಯಾಪ್ಟನ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.ನಂತರ ನಡೆಯುವ ಆಸ್ಟ್ರೇಲಿಯಾ ವಿರುದ್ಧ ನಡೆಯುವ ಟಿ20 ಸರಣಿಗೆ ತಂಡಕ್ಕೆ ವಾಪಸ್ ಆಗಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಲ್ಲಿ ತಂಡವನ್ನ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ರೋಹಿತ್ ಮೂರನೇ ಬಾರಿಗೆ ತಂಡದ ನಾಯಕತ್ವದ ಜವಾಬ್ದಾರಿಯನ್ನ ತೆಗೆದುಕೊಳ್ಳುತ್ತಿದ್ದಾರೆ. ತಂಡದ ವಿಕೆಟ್ ಕೀಪರ್ ಧೊನಿಯನ್ನ ಎರಡೂ ಸರಣಿಗೂ ಕೈಬಿಟ್ಟಿದ್ದು ಅಚ್ಚರಿ ತಂದಿದೆ.ಇವರ ಬದಲು ರಿಷಭ್ ಪಂತ್ ವಿಕೆಟ್ ಕೀಪರ್ ಜವಾಬ್ದಾರಿಯನ್ನ ಹೊರಲಿದ್ದಾರೆ.

ವೆಸ್ಟ್‍ಇಂಡೀಸ್ ವಿರುದ್ದದ ಟಿ20 ಸರಣಿಗೆ : ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ದಿನೇಶ್ ಕಾರ್ತಿಕ್,ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್,ರಿಷಭ್ ಪಂತ್ (ವಿಕೆಟ್ ಕೀಪರ್), ಕೃಣಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಕುಲ್‍ದೀಪ್ ಯಾದವ್, ಭುವನೇಶ್ವರ್ ಕುಮಾರ್, ಬುಮ್ರಾ, ಖಲೀಲ್ ಅಹ್ಮದ್, ಉಮೇಶ್ ಯಾದವ್, ಶಾಬಾಜ್ ನದೀಂ.

ಆಸೀಸ್ ವಿರುದ್ದ ಟಿ20 ಸರಣಿಗೆ ಟೀಂ ಇಂಡಿಯಾ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್,ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಕುಲ್‍ದೀಪ್ ಯಾದವ್, ಯಜುವೇಂದ್ರ ಚಹಲ್, ವಾಷಿಂಗ್ಟನ್ ಸುಂದರ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್,ಜಸ್‍ಪ್ರೀತ್ ಬುಮ್ರಾ, ಉಮೇಶ್ ಯಾದವ್ ಖಲೀಲ್ ಅಹ್ಮದ್.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ