ಬಳ್ಳಾರಿ, ಅ.28- ಚುನಾವಣಾ ಪ್ರಚಾರ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮ್ಮದ್ ಖಾನ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ಸಚಿವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು, ಭಾರತದ ಚುನಾವಣಾ ಆಯೋಗಕ್ಕೆ ಬಿಜೆಪಿ ಮುಂದಾಗಿದೆ. ಚುನಾವಣಾ ಪ್ರಚಾರದ ಸಭೆಯಲ್ಲಿ ತಮ್ಮ ನೋವನ್ನು ನೋಡಿಕೊಂಡ ಮಹಿಳೆಯೊಬ್ಬರಿಗೆ ಸಚಿವರು ಹಣ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹಣ ನೀಡುವುದು ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ. ಇದರ ವಿರುದ್ಧ ಆಯೋಗಕ್ಕೆ ದೂರು ನೀಡುವುದಾಗಿ ಸ್ಥಳೀಯ ಬಿಜೆಪಿ ನಾಯಕರು ತಿಳಿಸಿದ್ದಾರೆ.