ಪುಣೆ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್ಗಳ ಅಂತರದಿಂದ ಸೋಲು ಕಂಡಿದೆ. ನಾಯಕ ವಿರಾಟ್ ಕೊಹ್ಲಿ ಶತಕದ ಹೊರತಾಗಿಯೂ 47.4 ಓವರ್ಗಳಲ್ಲಿ 240 ರನ್ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಸರಣಿಯಲ್ಲಿ ವೆಸ್ಟ್ ಇಂಡೀಸ್ 1-1 ಸರಣಿ ಸಮಬಲ ಸಾಧಿಸಿತು.
284 ರನ್ಗಳ ಸವಾಲನ್ನ ಬೆನ್ನತ್ತಿದ ಭಾರತ ಆರಂಭದಲ್ಲೆ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಧವನ್ ಜೊತೆಗೂಡಿದ ನಾಯಕ ಕೊಹ್ಲಿ ಎಚ್ಚರಿಕೆಯ ಆಟವಾಡಿ ಎರಡನೇ ವಿಕೆಟ್ಗೆ 81 ರನ್ ಸೇರಿಸಿ ತಂಡವನ್ನ ಆರಂಭಿಕ ಆಘಾತದಿಂದ ಪಾರು ಮಾಡಿದರು. ನಂತರ ಬಂದ ಅಂಬಾಟಿ ರಾಯ್ಡು 22, ರಿಷಭ್ ಪಂತ್ 24, ಧೋನಿ 7 ರನ್ ಬಾರಿಸಿ ಬೇಗನೆ ಪೆವಿಲಿಯನ್ ಸೇರಿ. ಏಕಾಂಗಿ ಹೋರಾಟ ನಡೆಸಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ 38ನೇ ಶತಕ ಬಾರಿಸಿ ಸಂಭ್ರಮಿಸಿದರು. ಕೊಹ್ಲಿ 107 ರನ್ಗಳಿಸಿ ಔಟಾಗುತ್ತಿದ್ದಂತೆ ಟೀಂ ಇಂಡಿಯಾದ ಸೋಲು ಖಚಿತವಾಯಿತು .
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ನಿಗದಿತ ಓವರ್ನಲ್ಲಿ 9 ವಿಕೆಟ್ ನಷ್ಟಕ್ಕೆ 283 ರನ್ ಗಳಿಸಿತು. ತಂಡದ ಪರ ಸ್ಪೋಟಕ ಬ್ಯಾಟ್ಸ್ಮನ್ ಶಾಯಿ ಹೋಪ್ (95) ಅವರ ಅರ್ಧ ಶತಕದ ನೆರವಿನಿಂದ ವೆಸ್ಟ್ ಇಂಡೀಸ್ ತಂಡ ಟೀಂ ಇಂಡಿಯಾಕ್ಕೆ 284 ರನ್ಗಳ ಗೆಲುವಿನ ಗುರಿ ನೀಡಿದೆ. ಟೀಂ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ 4 ವಿಕೆಟ್ ಪಡೆದು ಮಿಂಚಿದರು.