
ಜಮಖಂಡಿ: ಮಹರ್ಷಿ ವಾಲ್ಮೀಕಿ ಬಗ್ಗೆ ನಮಗಿರುವಷ್ಟು ಗೌರವ ಶ್ರೀರಾಮುಲುಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕೈ ಅಭ್ಯರ್ಥಿ ಆನಂದ್ ನ್ಯಾಮೇಗೌಡರ ಪರ ಪ್ರಚಾರಕ್ಕೆ ಆಗಮಿಸಿದ್ದ ಅವರು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಶ್ರೀರಾಮುಲಿಗೆ 371 ಜೆ ಗೊತ್ತಿಲ್ಲ. 420 ಮಾತ್ರ ಗೊತ್ತು ಎಂದು ಹೇಳಿದ್ದೆ. ಅದನ್ನೇ ದೊಡ್ಡದಾಗಿ ಮಾಡಲಾಗುತ್ತಿದೆ. ಐಪಿಸಿಯಲ್ಲಿ 420 ಇಲ್ಲವೇ ಎಂದು ಪ್ರಶ್ನಿಸಿದ ಅವರು, ಜನಾರ್ಧನರೆಡ್ಡಿ ವಿರುದ್ಧ ಪ್ರಕರಣಗಳು ದಾಖಲಾಗಿಲ್ಲವೇ ಎಂದರು.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆನಂದ್ ನ್ಯಾಮೇಗೌಡರಿಗೆ ಅತ್ಯಧಿಕ ಮತಗಳನ್ನು ನೀಡಿ ಗೆಲ್ಲಿಸಿ ಎಂದು ಮನವಿ ಮಾಡಿದರು. ಈ ವೇಳೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.