ಮಾಜಿ ಸಚಿವ ಜನಾರ್ಧನ ರೆಡ್ದಿಗೆ ಸಿದ್ದರಾಮಯ್ಯ ಟಾಂಗ್: ಸರಣಿ ಟ್ವೀಟ್ ಮೂಲಕ ಟೀಕಾಪ್ರಹಾರ ಮಾಡಿದ ಮಾಜಿ ಸಿಎಂ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕಾ ಪ್ರಹಾರವನ್ನೇ ಮಾಡಿದ್ದ ಮಾಜಿ ಸಚಿವ ಜನಾರ್ಧನ ರೆಡ್ದಿ ವಿರುದ್ಧ ಗುಡುಗಿರುವ ಸಿದ್ದರಾಮಯ್ಯ, ರೆಡ್ಡಿ ಸವಾಲನ್ನು ಸ್ವೀಕರಿಸಿದ್ದು, ಚರ್ಚೆಗೆ ವೇದಿಕ ಸಿದ್ದಗೊಳಿಸಿ ಎಂದು ಪ್ರತಿಸವಾಲು ಹಾಕಿದ್ದಾರೆ.

“ಚಿನ್ನದ ಕಮೋಡ್, ಚಿನ್ನದ ಕುರ್ಚಿ ಇವೆಲ್ಲ ಜನಾರ್ದನ ರೆಡ್ಡಿಯವರ ವೈಭವದ ಜೀವನಕ್ಕೆ ಸಾಕ್ಷಿಗಳು. ಇಷ್ಟೆಲ್ಲ ಎಲ್ಲಿಂದ ಬಂತು? ಇವರೇನು ಸಾಮ್ರಾಟ ವಂಶಸ್ಥರೇ,” ಇದು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿರುವ ಪರಿ.

ಮೊಳಕಾಲ್ಮೂರಿನಲ್ಲಿ ಮಾತನಾಡಿದ್ದ ಜನಾರ್ಧನ ರೆಡ್ಡಿ, ನಾಲ್ಕು ವರ್ಷ ನನ್ನನ್ನು ಜೈಲಿನಲ್ಲಿಟ್ಟು ಸಿದ್ದರಾಮಯ್ಯ ಆಳ್ವಿಕೆ ಮಾಡಿದರು. ನನ್ನಿಂದ ಎಷ್ಟು ಹಣ ವಸೂಲಿ ಮಾಡಿದರು ಎಂದು ಹೇಳಿಕೆ ನೀಡಿದ್ದರು. ರೆಡ್ಡಿ ಹೇಳಿಕೆ ನೀಡುತ್ತಲೇ ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ವಗದಾಳಿ ನಡೆಸಿದ್ದಾರೆ.

ಜನಾರ್ಧನ ರೆಡ್ಡಿಯವರ ಸವಾಲನ್ನು ನಾನು ಸ್ವೀಕರಿಸಿದ್ದೇನೆ, ಅವರ ಜೊತೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಬಳ್ಳಾರಿಯಿಂದ‌ ಗಡಿಪಾರಾಗಿರುವ ರೆಡ್ಡಿಯವರೇ ಚರ್ಚೆಯ ಸ್ಥಳ ಮತ್ತು ಸಮಯ ನಿಗದಿಪಡಿಸಲಿ ಎಂದು ಹೇಳಿದ್ದಾರೆ.

ಚಿನ್ನದ ಕಮೋಡ್, ಚಿನ್ನದ ಕುರ್ಚಿ ಇವೆಲ್ಲ ಜನಾರ್ಧನ ರೆಡ್ಡಿಯವರ ವೈಭವದ ಜೀವನಕ್ಕೆ ಸಾಕ್ಷಿಗಳು. ಇಷ್ಟೆಲ್ಲ ಎಲ್ಲಿಂದ ಬಂತು? ಇವರೇನು ಸಾಮ್ರಾಟ ವಂಶಸ್ಥರೇ? ಈ‌ ಸಂಪತ್ತು ಗಣಿಲೂಟಿಯ ಸಂಪಾದನೆ ಎನ್ನುವುದು ಬಳ್ಳಾರಿ ಮಾತ್ರವಲ್ಲ‌ ಇಡೀ ದೇಶಕ್ಕೆ ಗೊತ್ತು. ಇಷ್ಟಾದ ಮೇಲೆಯೂ ತಮ್ಮನ್ನು ಪ್ರಾಮಾಣಿಕರೆಂದು ಹೇಳಿಕೊಳ್ಳಲು ನಾಚಿಕೆಯಾಗುವುದಿಲ್ವೇ ಎಂದು ಪ್ರಶ್ನಿಸಿದ್ದಾರೆ.

ಇನ್ನು ತನ್ನನ್ನು ಜೈಲಿನಲ್ಲಿಟ್ಟು ಅಧಿಕಾರ ನಡೆಸಿದರು ಎಂಬ ಜನಾರ್ಧನ ರೆಡ್ಡಿ ಹೇಳಿಕೆಗೂ ತಿರುಗೇಟು ನೀಡಿರುವ ಸಿದ್ದರಾಮಯ್ಯ, ’ಸಿದ್ದರಾಮಯ್ಯನವರು ಅನ್ಯಾಯವಾಗಿ ನನ್ನನ್ನು ನಾಲ್ಕು ವರ್ಷ ಜೈಲಿಗೆ ಹಾಕಿಸಿದ್ದರು ಎಂದು ಕಣ್ಣೀರು ಹಾಕುತ್ತಿರುವ ಜನಾರ್ದನ ರೆಡ್ಡಿಯವರೇ, ದಯವಿಟ್ಟು ನಿಮ್ಮ ಪಕ್ಷದ ಸಂಸದರೇ ಬರೆದಿದ್ದ ಈ ಪುಸ್ತಕ ಓದಿ. ಜೈಲಿಗೆ ಹೋಗುವ ಪಾಪ ಏನು ಮಾಡಿದ್ದೀರಿ ಎಂದು ಗೊತ್ತಾಗುತ್ತೆ” ಎಂದು ಪುಸ್ತಕದ ಚಿತ್ರವನ್ನು ಪ್ರಕಟಿಸಿ ರೆಡ್ಡಿ ಅವರಿಗೆ ಟಾಂಗ್​ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ