ಪಾಟ್ನಾ: ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮಿತ್ರ ಪಕ್ಷ ಸಂಯುಕ್ತ ಜನತಾದಳ ( ಜೆಡಿಯಷದ ಅಜೆಂಡಾ ಅಲ್ಲ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡುವ ತೀರ್ಪಿಗೆ ನಾವು ಬದ್ಧರಾಗಿರುತ್ತೇವೆ ಎಂದುತಿಳಿಸಿದೆ.
ಈ ಕುರಿತು ಮಾತನಾಡಿರುವ ಜೆಡಿಯು ವಕ್ತಾರ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತ ಬಳಗದ ಮುಖಂಡ ಸಂಜಯ್ ಸಿಂಗ್, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನಮ್ಮ ಪಕ್ಷದ ಅಜೆಂಡಾದಲ್ಲಿ ಇಲ್ಲ. ಸದ್ಯ ರಾಮ ಮಂದಿರ ನಿರ್ಮಿಸಬೇಕು ಎಂದು ಹೇಳಲಾಗುತ್ತಿರುವ ಜಾಗ ವಿವಾದಿತವಾಗಿದೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡುವ ತೀರ್ಪಿಗೆ ನಾವು ಬದ್ಧರಾಗಿರುತ್ತೇವೆ. ರಾಮ ಮಂದಿರಕ್ಕೆ ಸಂಬಂಧಿಸಿದಂತೆ ನಾವು ಯಾರನ್ನೂ ಬೆಂಬಲಿಸುವುದಿಲ್ಲ, ತಟಸ್ಥವಾಗಿರುವುದಾಗಿ ಹೇಳಿದ್ದಾರೆ
2019ರ ಜನವರಿಯಲ್ಲಿ ರಾಮಮಂದಿರ ವಿವಾದದ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ. ಈ ನಿಟ್ಟಿನಲ್ಲಿ ರಾಮ ಮಂದಿರದ ವಿವಾದದಲ್ಲಿ ಬಿಜೆಪಿಯೊಂದಿಗೆ ತನ್ನದೇನೂ ಪಾತ್ರವಿಲ್ಲ ಎಂದು ಜೆಡಿಯು ಮತ್ತೊಮ್ಮೆ ಸ್ಪಷ್ಟಪಡಿಸಿದೆ