ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ; ಮಾರ್ಚ್​ 1ರಿಂದ ಪರೀಕ್ಷೆಗಳು ಆರಂಭ

ಬೆಂಗಳೂರು : ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಪ್ರಸ್ತಾವಿತ ವೇಳಾಪಟ್ಟಿ ಪ್ರಕಟಗೊಂಡಿದ್ದು, 2019ರ ಮಾರ್ಚ್​ 1ರಿಂದ 18ರವರೆಗೆ ಪರೀಕ್ಷೆಗಳು ನಡೆಯಲಿವೆ.
ಈ ಸಂಬಂಧ ಆಕ್ಷೇಪಗಳಿದ್ದಲ್ಲಿ ನವೆಂಬರ್ 28ರೊಳಗೆ ಜಂಟಿ ನಿರ್ದೇಶಕರು (ಪರೀಕ್ಷೆ), ಪದವಿಪೂರ್ವ ಶಿಕ್ಷಣ ಇಲಾಖೆ, ಸಂಪಿಗೆ ರಸ್ತೆ, 18ನೇ ಅಡ್ಡ ರಸ್ತೆ, ಮಲ್ಲೇಶ್ವರ, ಬೆಂಗಳೂರು-12 ಇಲ್ಲಿಗೆ ಸಲ್ಲಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಗದಿತ ದಿನಾಂಕದೊಳಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ನಿರ್ದೇಶಕರು ಹೇಳಿದ್ದಾರೆ.

ಮಾರ್ಚ್​ 1ರಂದು ಇತಿಹಾಸ, ಭೌತಶಾಸ್ತ್ರ, ಬೇಸಿಕ್​ ಮ್ಯಾಥ್ಸ್​
ಮಾರ್ಚ್​ 2ರಂದು ಮಾಹಿತಿ ತಂತ್ರಜ್ಞಾನ, ರೀಟೆಲ್, ಆಟೋಮೊಬೈಲ್, ಹೆಲ್ತ್​ಕೇರ್, ಬ್ಯೂಟಿ ಮತ್ತು ವೆಲ್​ನೆಸ್​
ಮಾರ್ಚ್​ 5ರಂದು ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
ಮಾರ್ಚ್​ 6ರಂದು ತರ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ
ಮಾರ್ಚ್​ 7ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ಗಣಿತ
ಮಾರ್ಚ್​ 8ರಂದು ಉರ್ದು, ಸಂಸ್ಕೃತ
ಮಾರ್ಚ್​ 9ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್​ 11ರಂದು ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನ ಶಾಸ್ತ್ರ
ಮಾರ್ಚ್​ 12ರಂದು ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ
ಮಾರ್ಚ್​ 13ರಂದು ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ
ಮಾರ್ಚ್​ 14ರಂದು ಅರ್ಥಶಾಸ್ತ್ರ, ಜೀವಶಾಸ್ತ್ರ
ಮಾರ್ಚ್​ 15ರಂದು ಹಿಂದಿ
ಮಾರ್ಚ್ 16ರಂದು ಕನ್ನಡ
ಮಾರ್ಚ್​ 18ರಂದು ಇಂಗ್ಲಿಷ್
ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ