ಕನ್ನಡ ರಾಜ್ಯೋತ್ಸವ ಪ್ರಯುಕ್ತ ನವಂಬರ್ 1ರಂದು ಕನ್ನಡ ತಾಯಿ ಭುವನೇಶ್ವರಿ ಪೂಜೆ

ಬೆಂಗಳೂರು, ಅ.30-ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ತಾಯಿ ಭುವನೇಶ್ವರಿ ಪೂಜೆ, ಉತ್ಸವ, ನಗರ ದೇವತೆ ಅಣ್ಣಮ್ಮ ದೇವಿ ವೈಭವದ ಮೆರವಣಿಗೆಯನ್ನು ನವೆಂಬರ್ 1 ರಂದು ಮೈಸೂರು ಬೈಕ್ ಸಮೀಪ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯೋತ್ಸವ ಸಮಿತಿ ಆಯೋಜಿಸಿರುವ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 10.30ಕ್ಕೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕನ್ನಡ ತಾಯಿ ಭುವನೇಶ್ವರಿ ಪೂಜೆ, ಉತ್ಸವ ಹಾಗೂ ನಗರ ದೇವತೆ ಅಣ್ಣಮ್ಮದೇವಿಯ ಮೆರವಣಿಗೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಟಾಳ್ ನಾಗರಾಜ್ ವಹಿಸುವರು.

ಅಂದು ಸಂಜೆ 6.30ಕ್ಕೆ ನೃಪತುಂಗ ಮಂಟಪದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕನ್ನಡ ಒಕ್ಕೂಟದ ಮುಖಂಡರನ್ನು ಸನ್ಮಾನಿಸಲಾಗುವುದು.
ಮುಖ್ಯ ಅತಿಥಿಯಾಗಿ ಹಿರಿಯ ಮುಖಂಡರಾದ ರಾಮಚಂದ್ರೇಗೌಡ ಪಾಲ್ಗೊಳ್ಳಲಿದ್ದಾರೆ. ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಶಿವರಾಮೇಗೌಡ, ಪ್ರವೀಣ್‍ಕುಮಾರ್‍ಶೆಟ್ಟಿ, ಟಿ.ಪಿ.ಪ್ರಸನ್ನಕುಮಾರ್, ಅ.ತಿ.ರಂಗನಾಥ್, ಮಂಜುನಾಥ್‍ದೇವ್ ಹಾಗೂ ಎಚ್.ವಿ.ಗಿರೀಶ್‍ಗೌಡ ಅವರನ್ನು ಸನ್ಮಾನಿಸಲಾಗುವುದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ