ರಾಜ್ಯ ರಾಜಕಾರಣಕ್ಕೆ ಹೊಸ ತಿರುವ ನೀಡಲಿರುವ ಉಪಚುನಾವಣೆ

ಬೆಂಗಳೂರು,ಅ.31- ರಾಜ್ಯ ರಾಜಕಾರಣಕ್ಕೆ ಹೊಸ ತಿರುವು ನೀಡಲಿದೆ ಎಂದು ಹೇಳಲಾಗುತ್ತಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹಿಂದೆಂದೂ ಕಾಣದ ಸ್ಪರ್ಧೆ ಏರ್ಪಟ್ಟಿದೆ.
ಮೇಲ್ನೋಟಕ್ಕೆ ನಾವೇ ಗೆಲ್ಲುತ್ತೇವೆ ಎಂದು ಎದೆಯುಬ್ಬಿಸಿ ಎಲ್ಲ ಪಕ್ಷಗಳ ಮುಖಂಡರು ಹಾಗೂ ಅಭ್ಯರ್ಥಿಗಳು ಹೇಳುತ್ತಿದ್ದರೂ ವಾಸ್ತವ ಚಿತ್ರಣ ಮಾತ್ರ ಬೇರೆಯೇ ಇದೆ.

ಐದು ಕ್ಷೇತ್ರಗಳಲ್ಲೂ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದ್ದು , ಯಾರೇ ಗೆದ್ದರೂ ಅಂತರ ಮಾತ್ರ ಕೆಲವೇ ಸಾವಿರಗಳು ಮಾತ್ರ ಎನ್ನಲಾಗುತ್ತಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ಪಾಲಿಗೆ ಈ ಚುನಾವಣೆ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ.

ಗೆಲ್ಲಲೇಬೇಕೆಂದು ಹಠಕ್ಕೆ ಬಿದ್ದಿರುವ ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಿಕೊಳ್ಳಲು ಈಗಾಗಲೇ ನೇತಾರರು ನಾನಾ ರೀತಿಯ ಕಸರತ್ತು ನಡೆಸಿದ್ದಾರೆ.ಮತದಾತನಕ್ಕೆ ನಾಲ್ಕು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಐದು ಕ್ಷೇತ್ರಗಳ ಚಿತ್ರಣ ಹೇಗಿದೆ ಎಂಬುದನ್ನು ವಿವರಿಸುವ ಪ್ರಯತ್ನ ಇದಾಗಿದೆ.
ಅಭಿವೃದ್ದಿಯನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಮತಯಾಚನೆ ಮಾಡಿವೆ. ಆದರೆ ಮತದಾನಕ್ಕೆ ಮುಂದೆ ಎರಡು ದಿನ ನಡೆಯುವ ರಾತ್ರಿ ಕಾರ್ಯಾಚರಣೆಗಳೇ ನಿರ್ಣಾಯಕ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ.
ಐದು ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಯಾವ ಯಾವ ಕ್ಷೇತ್ರಗಳಲ್ಲಿ ಸ್ಥಿತಿಗತಿ ಹೇಗಿದೆ ಎಂಬುದನ್ನು ವಿವರಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ