ನವದೆಹಲಿ, ಅ.31-ಏಕತೆಯ ಹರಿಕಾರ ಮತ್ತು ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭ್ಭಾಯ್ ಪಟೇಲ್ ಅವರ ಜನ್ಮ ಜಯಂತಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಗೃಹ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದರು.
ರಾಜಧಾನಿ ದೆಹಲಿಯ ಪಟೇಲ್ ಚೌಕ್ನಲ್ಲಿ ಇಂದು ಬೆಳಗ್ಗೆ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮತ್ತು ಇತರ ಗಣ್ಯಾತಿಗಣ್ಯರು ಸರ್ದಾರರ ಪ್ರತಿಮೆಗೆ ಮಾರ್ಲಾಪಣೆ ಮಾಡಿ ಗೌರವ ಸಲ್ಲಿಸಿದರು.
ಕೇಂದ್ರ ನಗರಾಭಿವೃದ್ದಿ ಸಚಿವ ಹರ್ದೀಪ್ ಪುರಿ, ದೆಹಲಿ ಲೆಫ್ಟಿನೆಂಟ್ ಗೌರ್ನರ್ ಅನಿಲ್ ಜೈಜಾಲ್ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಭಾರತದ ಪ್ರಥಮ ಗೃಹ ಸಚಿವ ಹಾಗೂ ಅಖಂಡ ಭಾರತ ಏಕತೆಯ ಹರಿಕಾರ ಪಟೇಲ್ ಅವರ 143ನೆ ಜನ್ಮಜಯಂತಿಯನ್ನು ಇಂದು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ.