ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದ್ದು, ಇಲ್ಲಿನ ಬದ್ಗಮ್ ಜಿಲ್ಲೆಯಲ್ಲಿ ಇಂದು ನಸುಕಿನ ಜಾವ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆಗೈದಿದೆ.
ಬದ್ಗಮ್ ಜಿಲ್ಲೆಯ ಅರಿಜಾಲ್ ಪ್ರದೇಶದ ಬುಗೂ ಗ್ರಾಮದಲ್ಲಿ ಉಗ್ರರು ಅವಿತುಕೊಂಡಿರುವ ಕುರಿತು ನಿಖರ ಮಾಹಿತಿ ಪಡೆದ ಯೋಧರು ಈ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ಆರಂಭಿಸಿದ್ದಾರೆ. ಈ ವೇಳೆ ಭದ್ರತಾ ಪದೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ.
ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಅಂತಿಮವಾಗಿ ಇಬ್ಬರು ಉಗ್ರರು ಹತರಾದರು. ಗ್ರಾಮದಲ್ಲಿ ಶೋಧಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.