ನವದೆಹಲಿ: 63ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ.
ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ಶುಭ ಹಾರೈಸಿದ್ದಾರೆ.