ದೀಪಾವಳಿ ಹಿನ್ನಲೆ: ಕೆಎಸ್‍ಆರ್‍ಟಿಸಿಯಿಂದ 1,500 ಹೆಚ್ಚುವರಿ ಬಸ್ ಸೌಲಭ್ಯ

ಬೆÉಂಗಳೂರು, ನ.1- ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ-ಕೆಎಸ್‍ಆರ್‍ಟಿಸಿ ನ.2ರಿಂದ 5ರ ವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ 1,500 ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿದೆ.
ನಗರದ ಪ್ರಮುಖ ಕೇಂದ್ರವಾದ ಮೆಜೆಸ್ಟಿಕ್, ಸ್ಯಾಟಲೈಟ್, ಶಾಂತಿನಗರ, ಜಯನಗರ ಸೇರಿದಂತೆ ನಗರದ ಪ್ರಮುಖ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಬಸ್ ಸೇವೆ ಒದಗಿಸಲಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗಿದೆ.

ಮೈಸೂರು ರಸ್ತೆಯ ಸ್ಯಾಟಲೈಟï ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹಾಗೂ ಶಾಂತಿನಗರದ ಕೇಂದ್ರ ಘಟಕ 2 ಮತ್ತು 4ರ ಮುಂಭಾಗದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ವಿವಿಧ ಸ್ಥಳಗಳಿಗೆ ಬಸ್ ಕಾರ್ಯಾಚರಣೆ ಇರಲಿದೆ.

ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡರಸ್ತೆ, ಬನಶಂಕರಿ, ಜೀವನ್ ಬೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮೊದಲಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮೊದಲಾದ ಸ್ಥಳಗಳಿಗೆ ಬಸ್ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‍ಆರ್‍ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದಲೂ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್ ಸೇವೆ ಒದಗಿಸಲು ಸೂಚಿಸಲಾಗಿದೆ. ನ.11ರಂದು ಹೊರ ರಾಜ್ಯಗಳಿಂದ ಬೆಂಗಳೂರಿಗೆ ವಿಶೇಷ ಬಸ್‍ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ