ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ರಾಮನಗರ, ನಾಗಮಂಗಲದಲ್ಲಿ ಬಿರುಸಿನ ಪ್ರಚಾರ

ಬೆಂಗಳೂರು,ನ.1-ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಮನಗರದಲ್ಲಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಾಗಮಂಗಲದಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ರಾಮನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅನಿತಾಕುಮಾರಸ್ವಾಮಿ ಪರವಾಗಿ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಚಾರ ಹಾಗೂ ಬಹಿರಂಗ ಸಭೆಗಳಲ್ಲಿ ಪಾಲ್ಗೊಂಡು ಮತಯಾಚಿಸಿದರು.
ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಪರವಾಗಿ ನಾಗಮಂಗಲದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮತಯಾಚಿಸಿದರು.
ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ