ಕಣಿವೆ ರಾಜ್ಯದಲ್ಲಿ ಬಿಜೆಪಿ ಮುಖಂಡ, ಸಹೋದರನನ್ನು ಗುಂಡಿಕ್ಕಿ ಕೊಲೆಗೈದ ಉಗ್ರರು !

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಹಿರಿಯ ನಾಯಕ ಹಾಗೂ ಅವರ ಸಹೋದರರನ್ನು ಉಗ್ರರು ಕಿಶ್ತ್‍ವಾರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ರಾಜ್ಯ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹಾರ್ ಹಾಗೂ ಸಹೋದರ ಅಜಿತ್ ಉಗ್ರರ ಗುಂಡಿಗೆ ಬಲಿಯಾದ ದುರ್ದೈವಿಗಳು. ಇಬ್ಬರು ತಮ್ಮ ಅಂಗಡಿಯನ್ನು ಮುಚ್ಚಿ ಮನೆಗೆ ಮರಳುತ್ತಿದ್ದರು. ರಾತ್ರಿಯಾಗಿದ್ದರಿಂದ ತಿರುವಿನಲ್ಲಿ ರಸ್ತೆ ವಾಹನ ತಡೆದ ಉಗ್ರರು, ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ಉಗ್ರರ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಸಮೀಪ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿ ಮಧ್ಯದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಕುರಿತು ತನಿಖೆ ಆರಂಭವಾಗಿದೆ ಎಂದು ಪೊಲೀಸ್ ಆಯುಕ್ತ ಸಂಜೀವ್ ವರ್ಮಾ ಸ್ಪಷ್ಟನೆ ನೀಡಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ