ಮುಂಬೈ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿಯಾಗಿದ್ದು, ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಮುಂಬೈನ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅಮಿತ್ ಶಾ ಹಾಗೂ ಭಾಗವತ್ ಬಳಿಕ ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಮಮಂದಿರ ವಿಚಾರ ಕುರಿತಂತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಮ ಮಂದಿರ ನಿರ್ಮಾಣ ಕುರಿತಂತೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಬೇಕೆಂದು ಆರ್ ಎಸ್ಎಸ್ ಆಗ್ರಹಿಸುತ್ತಿದ್ದು, ಭೇಟಿ ವೇಳೆ ಅಮಿತ್ ಶಾ ಹಾಗೂ ಭಾಗವತ್ ಇಬ್ಬರೂ ಈ ಕುರಿತು ಮಾತುಕತೆ ನಡೆಸಿರುವ ಸಾಧ್ಯತೆಗಳಿವೆ.
ಇನ್ನು ರಾಮ ಮಂದಿರ ನಿರ್ಮಾಣ ಕುರಿತಂತೆ ಸುಪ್ರೀಂಕೋರ್ಟ್, ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ನಿರಾಕರಿಸಿರುವುದು ಹಾಗೂ ಶಬರಿಮಲೆ ದೇವಾಲಯಕ್ಕೆ ಎಲ್ಲಾ ಮಹಿಳೆಯರ ಭೇಟಿಗೂ ಅವಕಾಶ ನೀಡಬೇಕೆಂದು ತೀರ್ಪು ನೀಡಿದ ಬೆನ್ನಲ್ಲೇ ಉಭಯ ನಾಯಕರ ಈ ಭೇಟಿ ಕುತೂಹಲವನ್ನು ಇಮ್ಮಡಿಗೊಳಿಸಿದೆ.
BJP,Amith Shah,meet,RSS,Mohan Bhagwat