ಬೆಂಗಳೂರು: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಳಿಯಿದ್ದ ರಾಜ್ಯ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷ ಸ್ಥಾನವನ್ನು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರಿಗೆ ನೀಡಲಾಗಿದೆ.
ಪುಷ್ಪಾ ಅವರನ್ನು ಮಹಿಳಾ ಕಾಂಗ್ರೆಸ್ನ ಅಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರು ಆದೇಶಿಸಿದ್ದಾರೆ.
ಈ ವರೆಗೆ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷರಾಗಿದ್ದ ಬೆಳಗಾವಿಯ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಒಬ್ಬರಿಗೆ ಒಂದೇ ಸ್ಥಾನ ಎಂಬ ನಿಯಮವನ್ನು ಪಾಲಿಸುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ನ ಅಧ್ಯಕ್ಷ ಹುದ್ದೆಯನ್ನು ಬೇರೊಬ್ಬರಿಗೆ ವಹಿಸುವ ದೃಷ್ಟಿಯಿಂದ ಕಳೆದ ಹಲವು ದಿನಗಳಿಂದ 16ಕ್ಕೂ ಹೆಚ್ಚು ಜನರನ್ನು ಸಂದರ್ಶನ ಮಾಡಿತ್ತು. ಮಾಜಿ ಮೇಯರ್ ಪದ್ಮಾವತಿ ಮತ್ತು ನಾಗಲಕ್ಷ್ಮೀ ಹೆಸರೂ ಕೂಡ ಈ ಹುದ್ದೆಗೆ ಕೇಳಿ ಬಂದಿತ್ತು. ಆದರೆ ಅಂತಿಮವಾಗಿ ಪುಷ್ಪಾ ಅವರನ್ನು ನೇಮಕ ಮಾಡಲಾಗಿದೆ.
Pushpa amarnath,appointed,karnataka mahila congress president