ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಪುಷ್ಪಾ ಅಮರನಾಥ್​ ನೇಮಕ

ಬೆಂಗಳೂರು: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಬಳಿಯಿದ್ದ ರಾಜ್ಯ ಮಹಿಳಾ ಕಾಂಗ್ರೆಸ್​ನ ಅಧ್ಯಕ್ಷ ಸ್ಥಾನವನ್ನು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಷ್ಪಾ ಅಮರನಾಥ್​ ಅವರಿಗೆ ನೀಡಲಾಗಿದೆ.

ಪುಷ್ಪಾ ಅವರನ್ನು ಮಹಿಳಾ ಕಾಂಗ್ರೆಸ್​ನ ಅಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಅಶೋಕ್​ ಗೆಹ್ಲೋಟ್​ ಅವರು ಆದೇಶಿಸಿದ್ದಾರೆ.

ಈ ವರೆಗೆ ಮಹಿಳಾ ಕಾಂಗ್ರೆಸ್​ನ ಅಧ್ಯಕ್ಷರಾಗಿದ್ದ ಬೆಳಗಾವಿಯ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಒಬ್ಬರಿಗೆ ಒಂದೇ ಸ್ಥಾನ ಎಂಬ ನಿಯಮವನ್ನು ಪಾಲಿಸುವ ಕಾಂಗ್ರೆಸ್​, ಮಹಿಳಾ ಕಾಂಗ್ರೆಸ್​ನ ಅಧ್ಯಕ್ಷ ಹುದ್ದೆಯನ್ನು ಬೇರೊಬ್ಬರಿಗೆ ವಹಿಸುವ ದೃಷ್ಟಿಯಿಂದ ಕಳೆದ ಹಲವು ದಿನಗಳಿಂದ 16ಕ್ಕೂ ಹೆಚ್ಚು ಜನರನ್ನು ಸಂದರ್ಶನ ಮಾಡಿತ್ತು. ಮಾಜಿ ಮೇಯರ್​ ಪದ್ಮಾವತಿ ಮತ್ತು ನಾಗಲಕ್ಷ್ಮೀ ಹೆಸರೂ ಕೂಡ ಈ ಹುದ್ದೆಗೆ ಕೇಳಿ ಬಂದಿತ್ತು. ಆದರೆ ಅಂತಿಮವಾಗಿ ಪುಷ್ಪಾ ಅವರನ್ನು ನೇಮಕ ಮಾಡಲಾಗಿದೆ.

Pushpa amarnath,appointed,karnataka mahila congress president

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ