ಶಿವಮೊಗ್ಗ: ಪ್ರತಿಷ್ಠೆ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದರು.
ಶಿಕಾರಿಪುರ ತಾಲೂಕು ಕಚೇರಿ ಆವರಣದಲ್ಲಿರುವ ಮತಗಟ್ಟೆಗೆ ಬಂದ ಬಿ ಎಸ್ ಯಡಿಯೂರಪ್ಪ ಹಾಗೂ ಪುತ್ರರಾದ ಬಿ ವೈ ರಾಘವೇಂದ್ರ, ಬಿ ವೈ ವಿಜಯೇಂದ್ರ ಹಾಗೂ ಕುಟುಂಬ ಸದಸ್ಯರು ಮತದಾನ ಮಾಡಿದರು.
ಇದಕ್ಕೂ ಮುನ್ನ ಶಿಕಾರಿಪುರದ ಶ್ರೀ ಹುಚ್ಚುರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಿಎಸ್ವೈ ಪುತ್ರ ಮತ್ತು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹಾಗೂ ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.
ಬಳಿಕ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಮಠದಲ್ಲಿ ಪೂಜೆ ಸಲ್ಲಿಸಿದ ಬಳಿಕ ತಾಲೂಕು ಕಚೇರಿ ಆವರಣದ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.
By Election,Shivamogga,B S Yedyurappa,B Y Raghavendra