ಮೋದಿಯನ್ನು ಚೇಳು ಎಂದಿದ್ದಕ್ಕೆ ಶಶಿ ತರೂರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ನವದೆಹಲಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಶಶಿ ತರೂರ್ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ’ಚೇಳು’ ಎಂದು ಸಂಬೋಧಿಸಿದ್ದ ಹಿನ್ನಲೆಯಲ್ಲಿ ದೆಹಲಿಯ ಭಾರತೀಯ ಜನತಾ ಪಕ್ಷದ ನಾಯಕ ರಾಜೀವ್ ಬಬ್ಬರ್ ಶಶಿ ತರೂರ್ ವಿರುದ್ಧ ಮೊಕದ್ದಮೆ ದಾಖಲಿಸಿದ್ದು, ಹಿಂದೂಗಳ ಧಾರ್ಮಿಕ ಭಾವನೆಗೆ ತರೂರ್ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನೊಬ್ಬ ಶಿವಭಕ್ತನಾಗಿದ್ದೇನೆ.ತರೂರ್ ಕೋಟಿಗಟ್ಟಲೆ ಭಕ್ತರ ಭಾವನೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಲ್ಲದೆ ಅವರ ಭಾವನೆಗೆ ಘಾಸಿಯುಂಟುಮಾಡಿದ್ದಾರೆ ಎಂದು ದೂರಿನಲ್ಲಿ ಬಬ್ಬರ್ ತಿಳಿಸಿದ್ದಾರೆ.ಈ ಹಿನ್ನಲೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ತರೂರ್ ವಿರುದ್ಧ ದೂರು ದಾಖಲಿಸಲಾಗಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದ್ದ ಬೆಂಗಳೂರು ಸಾಹಿತ್ಯೋತ್ಸವದಲ್ಲಿ ಭಾಗವಹಿಸಿದ್ದ ಶಶಿ ತರೂರ್ ಆರ್.ಎಸ್.ಎಸ್.ಪಾಲಿಗೆ ನರೇಂದ್ರ ಮೋದಿ ಶಿವಲಿಂಗದ ಮೇಲಿನ ಚೇಳಿನಂತೆ ಅದನ್ನು ಬರಿಗೈನಲ್ಲಿ ಸರಿಸಲು ಸಾಧ್ಯವಿಲ್ಲ, ಹೊಡೆಯಲೂ ಆಗುವುದಿಲ್ಲು ಹೇಳಿಕೆ ನೀಡಿದ್ದರು.

Defamation complaint filed, against Shashi Tharoor, “scorpion”, remark against Prime Minister Narendra Modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ