ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಹಣ ಪಡೆದು ದುರುಪಯೋಗ

ಬೆಂಗಳೂರು, ನ.3- ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಖಜಾಂಚಿ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಸದಸ್ಯತ್ವಕ್ಕೆಂದು ಹಣ ಪಡೆದು ಅದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕø ತರಾದ ಹಾಗೂ ನಿವೃತ್ತ ಶಿಕ್ಷಕ ಬಿ.ಶಂಕರಗೌಡ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 1,80,000 ಪ್ರಾಥಮಿಕ ಶಾಲಾ ಶಿಕ್ಷಕರಿಂದ ತಲಾ 300ರೂ.ನಂತೆ ಸಂಘದ ಸದಸ್ಯತ್ವ ಹಾಗೂ ಸ್ಮಾರ್ಟ್‍ಕಾರ್ಡ್‍ಗೆಂದು ಹಣ ಕಟ್ಟಿಸಿಕೊಳ್ಳಲಾಗಿದೆ. ಈ ಮೂಲಕ 3.78 ಕೋಟಿ ರೂ. ಸಂಗ್ರಹಿಸಿದ್ದಾರೆ ಎಂದು ಹೇಳಿದರು.
ಸದಸ್ಯತ್ವಕ್ಕೆಂದು ಸ್ವೀಕರಿಸಿರುವ ಹಣವನ್ನು ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ, ಕಾರ್ಯದರ್ಶಿ ವಿ.ಎಂ.ನಾರಾಯಣಸ್ವಾಮಿ ಹಾಗೂ ಖಜಾಂಚಿ ಎಸ್.ಟಿ.ಗಂಗಣ್ಣ ಈ ಮೂವರು ದುರುಪಯೋಗಪಡಿಸಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.

ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದೆ. ಅವರು ತನಿಖೆ ನಡೆಸಿ ಈ ಮೂವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದ್ದರು. ಆದರೆ, ಯಾವುದೇ ಕಾನೂನು ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು.
ಇದರಿಂದ ಬೇಸತ್ತು ಮಾಧ್ಯಮಗಳ ಮುಂದೆ ಬಂದಿದ್ದೇನೆ ಎಂದು ಬಿ.ಶಂಕರಗೌಡ ಪಾಟೀಲ್ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ