ಪ್ರತಾಪ್ಗಢ: ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆಗೌ ಬರದಿಂದ ಸಾಗಿರುವ ನಡುವೆಯೇ ಬಿಜೆಪಿ ಕಾರ್ಯಕರ್ತನನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿದೆ.
ರಾಜಸ್ಥಾನದ ಪ್ರತಾಪ್ಗಢ ನಿಂದ 4 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಸಾಮ್ರಾತ್ ಕುಮ್ವತ್ ಎಂಬಾತ ರಸ್ತೆ ಬದಿಯಲ್ಲಿ ನಿಂತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಬಳಿಕ ಕತ್ತಿಯಿಂದ ಆತನ ಕುತ್ತಿಗೆಯನ್ನು ಸೀಳಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಂತರ ಸ್ಥಳೀಯರು ಆತನನ್ನು ರಕ್ಷಿಸಲು ಮುಂದಾದರೂ ಕೂಡ ಅಧಿಕ ರಕ್ತಸ್ರಾವದಿಂದಾಗಿ ಬಿಜೆಪಿ ಕಾರ್ಯಕರ್ತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸಮ್ರಾತ್ನ ಮೃತದೇಹವನ್ನಿಟ್ಟುಕೊಂಡು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ತನಿಖೆ ಕೈಗೊಂಡಿರುವ ಪೊಲೀಸರು ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Rajasthan,BJP Worker,Murder,Pratapgarh