ಬೆಂಗಳೂರು,ನ.4- ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರು ಚುನಾವಣಾ ಕಣದಿಂದ ಹಿಂದೆ ಸರಿಯಲಿದ್ದಾರೆಂದು ಹೇಳಿದ್ದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಂಡ್ಯದ ಪಶ್ಚಿಮ ಪೆÇಲೀಸ್ ಠಾಣೆಯಲ್ಲಿ ಪೆÇಲೀಸರು ಗೋಪಾಲಕೃಷ್ಣ ಬೇಳೂರು ವಿರುದ್ದ ಎಫ್ಐಆರ್ ದಾಖಲಿಸಿಕೊಂಡಿದ್ದು, ಒಂದೆರಡು ದಿನಗಳಲ್ಲಿ ಶಿವಮೊಗ್ಗಕ್ಕೆ ತೆರಳಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಮೊದಲು ಪೆÇಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಿದ್ದಾರೆ. ಒಂದು ವೇಳೆ ಗೈರು ಹಾಜರಾದರೆ ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ತೆರಳಿ ಅಲ್ಲಿಯೇ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮಂಡ್ಯ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯನವರು ನ.1ರಂದು ಪಶ್ಚಿಮ ಪೆÇಲೀಸ್ ಠಾಣೆಗೆ ದೂರು ನೀಡಿ ಬೇಳೂರು ವಿರುದ್ದ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.
ದೂರು ದಾಖಲಿಸಿಕೊಂಡಿದ್ದ ಪೆÇಲೀಸರು ಇದೀಗ ಎಫ್ಐಆರ್ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಲು ಸಿದ್ದತೆ ನಡೆಸಿದ್ದಾರೆ.
ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಚುನಾವಣಾ ಕಣದಿಂದ ನಿವೃತ್ತಿ ಘೋಷಣೆ ಮಾಡಿದ್ದರು. ಈ ಸಂದರ್ಭದಲ್ಲಿ ಶಿವಮೊಗ್ಗದಲ್ಲಿದ್ದ ಗೋಪಾಲಕೃಷ್ಣ ಮಂಡ್ಯ ಅಭ್ಯರ್ಥಿಯು ಸದ್ಯದಲ್ಲೇ ನಿವೃತ್ತಿಯಾಗಲಿದ್ದಾರೆ ಎಂಬ ಹೇಳಿಕೆ ನೀಡಿದ್ದರು.
ಮತದಾರರಲ್ಲಿ ಗೊಂದಲ ಮೂಡಿಸುವ ದುರದ್ದೇಶದಿಂದಲೇ ಈ ಹೇಳಿಕೆ ನೀಡಲಾಗಿದೆ ಎಂದು ಡಾ.ಸಿದ್ದರಾಮಯ್ಯ ಬೇಳೂರು ವಿರುದ್ಧ ದೂರು ನೀಡಿದ್ದರು.