
ಬೆಂಗಳೂರು: ಶ್ರುತಿ ಹರಿಹರನ್ ಮೀ ಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಅರ್ಜುನ್ ಸರ್ಜಾಗೆ ನೋಟಿಸ್ ಜಾರಿ ಮಾಡಿದ್ದಾರೆ.
ನಾಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಅರ್ಜುನ್ ಸರ್ಜಾ ಕೂಡ ಇದಕ್ಕೆ ಉತ್ತರ ನೀಡಿದ್ದು, ನಾಳೆ ವಿಚಾರಣೆಗೆ ಬರುವುದಾಗಿ ತಿಳಿಸಿದ್ದಾರೆ.
ಈಗಾಗಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ಹೇಳಿಕೆಯನ್ನು ಪಡೆದಿದ್ದು ಅರ್ಜುನ್ ಸರ್ಜಾ ವಿಚಾರಣೆ ಮಾತ್ರ ಬಾಕಿ ಇದೆ. ಪ್ರಕರಣದ ಬಳಿಕ ಅರ್ಜುನ್ ಸರ್ಜಾಗೆ ಬಂಧನ ಭೀತಿ ಇತ್ತು. ಆದರೆ ಹೈಕೋರ್ಟ್ ಏಕಸದಸ್ಯ ಪೀಠ ಆರೋಪಿಯನ್ನು ಬಂಧಿಸದೇ ತನಿಖೆ ಮುಂದುವರೆಸುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.