ಚಂಡೀಗಢ: ಶಾಲೆಯಲ್ಲಿ ಸ್ಯಾನಿಟರಿ ಪ್ಯಾಡ್ ಧರಿಸಿದ ಹುಡುಗಿಯನ್ನು ಪತ್ತೆಹಚ್ಚಲುಶಿಕ್ಷಕರೊಬ್ಬರು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದಪ್ರಕರಣ ಪಂಜಾಬಿನ ಫಾಜಿಲ್ಕಾ ಜಿಲ್ಲೆಯಲ್ಲಿನಡೆದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.
ಶಾಲೆಯ ಶೌಚಾಲಯದಲ್ಲಿ ಸ್ಯಾನಿಟರಿ ಪ್ಯಾಡ್ಎಸೆಯಲಾಗಿತ್ತು. ಇದರಿಂದ ಕೋಪಗೊಂಡ ಶಿಕ್ಷಕ ಈ ಕೆಲಸ ಮಾಡಿದವರನ್ನುಪತ್ತೆ ಹಚ್ಚಲು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ್ದಾನೆ ಎನ್ನಲಾಗಿದೆ. ‘ಯಾರು ಪ್ಯಾಡ್ ಧರಿಸಿದ್ದಾರೆ ಎಂಬುದನ್ನು ನೋಡಲುಶಿಕ್ಷಕರು ನಮ್ಮನ್ನು ವಿವಸ್ತ್ರಗೊಳಿಸಿದ್ದರು’ ಎಂದು ಕೆಲ ವಿದ್ಯಾರ್ಥಿನಿಯರು ಅಳುತ್ತಾ ಪಾಲಕರಿಗೆ ದೂರು ನೀಡಿದ್ದಾರೆ.
ಸದ್ಯ ಈ ವಿಚಾರ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ವರೆಗೂ ಹೋಗಿದೆ. ಅವರು ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ. ಎರಡು ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದ್ದು, ಉಳಿದ ಶಿಕ್ಷಕರ ಮೇಲೆ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.