ಬೆಂಗಳೂರು, ನ.5- ವಿಧಾನಪರಿಷತ್ ನೂತನ ಸದಸ್ಯರಾಗಿ ಯು.ಬಿ.ವೆಂಕಟೇಶ್, ಪ್ರಕಾಶ್ ಕೆ.ರಾಥೋಡ್, ನಾಸೀರ್ ಅಹಮ್ಮದ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಧಿಕಾರ ಗೌಪತ್ಯೆ ಬೋಧಿಸಿದರು.
ವಿಧಾನಪರಿಷತ್ಗೆ ನಾಮನಿರ್ದೇಶನಗೊಂಡಿದ್ದ ವೆಂಕಟೇಶ್, ಪ್ರಕಾಶ್ , ಕೆ.ರಾಥೋಡ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದ ನಾಸೀರ್ ಅಹಮ್ಮದ್ ಅವರು ಇದೇ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ವೇಳೆ ವಿಧಾನಸಭೆಯ ಸಭಾಧ್ಯಕ್ಷ ರಮೇಶ್ ಕುಮಾರ್, ಸಚಿವರಾದ ಕೃಷ್ಣೇಭೆರೇಗೌಡ, ಜಮೀರ್ ಅಹಮ್ಮದ್ ಖಾನ್, ಪ್ರಿಯಾಂಕ್ ಖರ್ಗೆ, ರಾಜಶೇಖರ್ ಪಾಟೀಲ್, ಮಾಜಿ ಸಚಿವರಾದ ರೋಷನ್ ಬೇಗ್, ಎಂ.ಎ.ರಾಜಶೇಖರನ್ , ಶ್ಯಾಮನೂರು ಶಿವಶಂಕರಪ್ಪ, ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೇಯರ್ ಗಂಗಾಂಬಿಕೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನೂತನವಾಗಿ ಆಯ್ಕೆಗೊಂಡ ಸದಸ್ಯರಿಗೆ ಹೂಗುಚ್ಚ ನೀಡಿ ಅಭಿನಂದಿಸಲಾಯಿತು.